ಕೂಡಲಸಂಗಮ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿದ ಡಿಡಿಪಿಐ ಬಿ.ಕೆ.ನಂದನೂರ

ಶಿಕ್ಷಕರ ಮಾರ್ಗದರ್ಶನಲ್ಲಿ ವಿದ್ಯಾರ್ಥಿಗಳು ವೈಯಕ್ತಿಕ ವೇಳಾಪಟ್ಟಿ ತಯಾರಿಸಿಕೊಂಡು ನಿರಂತರ ಅಧ್ಯಯನ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಬಿ.ಕೆ.ನಂದನೂರ ಹೇಳಿದರು.
ಕೂಡಲಸಂಗಮ ಸರ್ಕಾರಿ ಪ್ರೌಢ ಶಾಲೆಗೆ ಗುರುವಾರ ಭೇಟಿ ನೀಡಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸದ ಮೂಲಕ ಮಾರ್ಗದರ್ಶನ ಮಾಡಿದರು, ವಿದ್ಯಾರ್ಥಿಗಳು ಶಿಕ್ಷಕರು ಹೇಳಿದ ಹಾಗೆ ಅಧ್ಯಯನ ಮಾಡಬೇಕು, ಪರೀಕ್ಷೆಗಳು ಸಮೀಪಿಸುತ್ತಿದ್ದು ಸಮಯಕ್ಕೆ ಹೆಚ್ಚಿನ ಆದ್ಯತೆ ಕೊಡಬೇಕು ಎಂದರು.
ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಒಂದು ಗಂಟೆಯವರೆಗೆ ಪರೀಕ್ಷಾ ಸಿದ್ದತೆ, ಮಹತ್ವದ ಕುರಿತು ಮಾರ್ಗದರ್ಶನ ಮಾಡಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಿದರು, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮಕ್ಕೂ ಪೂರ್ವದಲ್ಲಿ ತರಗತಿಗಳಿಗೆ ಭೇಟಿ ನೀಡಿ ಚಿತ್ರಪಟಗಳನ್ನು ವಿಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಶಾಲಾ ಮೈದಾನ, ಉದ್ಯಾನವನ, ಡೈನಿಂಗ ಹಾಲ್, ಸಮಾಜ ವಿಜ್ಞಾನ, ವಿಜ್ಞಾನ ಪ್ರಯೋಗಾಲಯ ವಿಕ್ಷಿಸಿ, ಶಿಕ್ಷಕರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಮುಖ್ಯಗುರು ಸಿ.ಎಸ್.ಚಟ್ಟೇರ ಹಾಗೂ ಶಿಕ್ಷಕರು ಇದ್ದರು.

Comments
Post a Comment